ನಿವೃತ್ತ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ನಿರ್ಧಾರ
ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜೊತೆ ಮಾತುಕತೆ ವೇಳೆ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ (ನ.8) ವೇತನ ಆಯೋಗ ರಚಿಸಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡ ಲಾಗುವುದು ಎಂದು ಭರವಸೆ ನೀಡಿದ್ದರು.