ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ
ಮಂಗಳೂರು:ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ನಟ ಪ್ರಮೋದ್ ಶೆಟ್ಟಿ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ರಿಷಬ್ ಶೆಟ್ಟಿ ದಂಪತಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿದ್ದಾರೆ. ಈ ಮೊದಲೇ ಕಾಂತಾರ ಸಿನಿಮಾ ವೀಕ್ಷಿಸಿದ್ದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಕಾಂತಾರ ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.