  : ನಿರುದ್ಯೋಗಿ ಯುವತಿಯರಿಗೆ ಗುಡ್‌ ನ್ಯೂಸ್‌; ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ (  ) ಕುರಿತ 30 ದಿನಗಳ ಉಚಿತ ತರಬೇತಿಯು ( ) ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ | : ಇಂದಿನಿಂದ ಬೆಂಗಳೂರಿನಲ್ಲಿ ಮೊಬೈಲ್ ವ್ಯಾನ್‌ಗಳ ಮೂಲಕ  ಈರುಳ್ಳಿ ಮಾರಾಟ
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಈ ಸುದ್ದಿಯನ್ನೂ ಓದಿ |   : ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.