 : ಪ್ರೀತಿಸಿದ್ದು ಅಣ್ಣ, ಕೊಲೆಯಾದದ್ದು ತಮ್ಮ; ಹೆತ್ತವರ ಮುಂದೆಯೇ ಇರಿದು ಕೊಲೆ
ಕಲಬುರಗಿ: ಅಣ್ಣ ಪ್ರೇಮ ಪ್ರಕರಣದಿಂದ ( ) ರೊಚ್ಚಿಗೆದ್ದ ಯುವತಿಯ ಮನೆಯವರು, ಆತನ ಮನೆಗೆ ಆಗಮಿಸಿ ಜಗಳ ತೆಗೆದು ಆತನ ತಮ್ಮನನ್ನು ಇರಿದು ಕೊಂದ ಘಟನೆ (  ) ಕಲಬುರಗಿ ( ) ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಿತ್‌ ಮಲ್ಲಾಬಾದ್ (19) ಕೊಲೆಯಾದ ಯುವಕ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಇದೇ ಊರಲ್ಲಿ ಸುಮಿತ್ ಸಹೋದರ ಸಚಿನ್ ವಾಸವಾಗಿದ್ದಾನೆ. ಸಚಿನ್ ನಾಗನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಸಲ ನ್ಯಾಯ ಪಂಚಾಯಿತಿ ಮಾಡಿದ್ದರು.
ನಿನ್ನೆ ಸಂಜೆ ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾರೆ. ಆಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ ಸುಮಿತ್​​ನನ್ನು ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. ಸುಮಿತ್‌ ತಾಯಿ ಮಗನನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರಡು ಗಂಟೆಗಳ ತೀವ್ರ ಚಿಕಿತ್ಸೆ ನೀಡಲಾಗಿದ್ದು, ಅದು ಫಲಕಾರಿಯಾಗಿದೆ ಬೆಳಗ್ಗೆ ಸುಮಿತ್ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಲಬುರಗಿ ಪೊಲೀಸ್ ಕಮಿಷನರ್ ಡಾ ಶರಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆ‌ ನಡೆದಿದೆ. ಕೊಲೆಯಾದ ಯುವಕನ ಸಹೋದರ ಮತ್ತು ಯುವತಿಯ ನಡುವಿನ ವಿಚಾರದಿಂದ ಕೂಲೆ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಆರೋಪಿಗಳ ಬಂಧನದ ಬಳಿಕ ಕೊಲೆಯ ಹಿಂದಿನ ಅಸಲಿ ಕಾರಣ ಬಯಲಾಗಲಿದೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: : ತಾಯಿಯ ತಿಥಿಗೆ ಬಂದಿದ್ದ ಉದ್ಯಮಿಯ ಕೊಚ್ಚಿ ಕೊಲೆ, ಪತ್ನಿ ಗಂಭೀರ