ಮಣ್ಣಿನಲ್ಲಿ ಸೇರಿದ್ದ ಮೃತ ಆಟೋ ಚಾಲಕನ ಶವ
ಮೂರು ದಿನಗಳ ನಂತರ ಮೃತ ದೇಹ ಪತ್ತೆ
ಎನ್ಡಿಆರ್ಎಫ್ ಕಾರ‍್ಯ ಶ್ಲಾಘನೀಯ
ತುಮಕೂರು:ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕರ‍್ಯಾಚರಣೆಯ ಫಲದಿಂದಾಗಿ ಸೋಮ ವಾರ ಭೀಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ.
ಕಳೆದ ಮೂರು ದಿನಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕ ಅಮ್ಜದ್ ಖಾನ್ ಅವರ ಮೃತದೇಹ ಶೋಧನಾ ಕಾರ‍್ಯವನ್ನು ಎನ್ಡಿಆರ್ಎಫ್ ತಂಡ, ಮಹಾನಗರ ಪಾಲಿಕೆ ಸಿಬ್ಬಂದಿ, ಅಗ್ನಿಶಾಮಕ ದಳದವರು ನಡೆಸಿದ್ದು, ಸೋಮವಾರ ಮಣ್ಣಿನಲ್ಲಿ ಸೇರಿದ್ದ ಶವವನ್ನು ಹಿಟಾಚಿ ಯಂತ್ರದ ಮೂಲಕ ಕರ‍್ಯಾಚರಣೆ ನಡೆಸಿ ಹೊರ ತೆಗೆಯ ಲಾಯಿತು.
ಆಟೋ ಚಾಲಕ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಜ್ಯೋತಿಗಣೇಶ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಎನ್ಡಿಆರ್ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯ ಸತತ ಕರ‍್ಯಾಚರಣೆಯಿಂದಾಗಿ ಪತ್ತೆಯಾಗಿದೆ. ಆಟೋ ಚಾಲಕ ಕೊಚ್ಚಿ ಹೋಗಿದ್ದ ಸ್ಥಳದಿಂದ ಸುಮಾರು ೧.೦೫ ಕಿ.ಮೀ. ದೂರದಲ್ಲಿ ಶವ ಪತ್ತೆಯಾಗಿದೆ ಎಂದರು.
ಮೃತರ ಕುಟುಂಬಕ್ಕೆ ಪರಿಹಾರ:ಮೃತ ವ್ಯಕ್ತಿಯ ಕುಟುಂಬಕ್ಕೆ ಸರಕಾರದಿಂದ ೫ ಲಕ್ಷ, ಪಾಲಿಕೆ ವತಿಯಿಂದ ೫೦ ಸಾವಿರ ಪರಿಹಾರ ನೀಡಲಾಗುವುದು. ಜತೆಗೆ ಆ ಕುಟುಂಬಕ್ಕೆ ಮನೆ ಸೇರಿದಂತೆ ಇತರೆ ಸವಲತ್ತು ಹಾಗೂ ಸಾಮಾಜಿಕ ಭದ್ರತೆ ಒದ ಗಿಸುವ ಕೆಲಸವನ್ನು ಸಹ ಮಾಡಲಾಗುವುದು ಎಂದು ಹೇಳಿದರು. ಜತೆಗೆ ವೈಯಕ್ತಿಕವಾಗಿ ಹಾಗೂ ಸಂಘ ಸಂಸ್ಥೆಗಳೆಲ್ಲ ಸೇರಿ ಕುಟುಂಬ ದವರಿಗೆ ಹೆಚ್ಚಿನ ಸಹಾಯ ಮಾಡಲಾಗುವುದು ಎಂದರು.
ಮಾಜಿ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಮೃತ ಆಟೋ ಚಾಲಕನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಬೇಕು ಹಾಗೂ ಈ ಕುಟುಂಬದ ಯಾರಾ ದರೂ ಒಬ್ಬರಿಗೆ ರ‍್ಕಾರಿ ನೌಕರಿ ಕೊಡಬೇಕು ಎಂದು ರ‍್ಕಾರವನ್ನು ಒತ್ತಾಯಿಸಿದರು.
ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ, ಮೃತ ಆಟೋ ಚಾಲಕ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಈಗ ಆ ಕುಟುಂಬ ದುಡಿಯುವ ವ್ಯಕ್ತಿಯನ್ನು ಕಳೆದು ಕೊಂಡಿದೆ. ರ‍್ಕಾರ ಈ ಕುಟುಂಬದವರಿಗೆ ಹೆಚ್ಚಿನ ಪರಿಹಾರ ಕಲ್ಪಿಸುವ ಜತೆಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಕಳೆದ ೩ ದಿನಗಳಿಂದ ನಡೆದ ಕರ‍್ಯಾಚರಣೆಯ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಮಹಾನಗರ ಪಾಲಿಕೆ ಸದಸ್ಯ ಹೆಚ್.ಡಿ. ಮಂಜು ನಾಥ್ ಮಾತನಾಡಿ, ಮೃತ ಆಟೋ ಚಾಲಕ ನನ್ನ ವ್ಯಾಪ್ತಿಯ ವರ‍್ಡ್ ನವರಾಗಿದ್ದು, ಸ್ವಂತ ಸೂರು ಸಹ ಹೊಂದಿಲ್ಲ. ಬಾಡಿಗೆ ಆಟೋ ಪಡೆದು ಜೀವನ ಸಾಗಿಸುತ್ತಿದ್ದರು. ದುರಾದೃಷ್ಟವಶಾತ್ ಆ ಕುಟುಂಬಕ್ಕೆ ಆಧಾರ ಇಲ್ಲದಂತಾಗಿದೆ. ಇದನ್ನು ಮನಗಂಡು ಜಿಲ್ಲಾಡಳಿತ ಹಾಗೂ ಸರಕಾರ ಈ ಕುಟುಂಬದವರಿಗೆ ೨೦ ಲಕ್ಷ ರು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸೊಗಡು ಭೇಟಿಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಡಳಿತ, ಸರಕಾರದೊಂದಿಗೆ ಮಾತನಾಡಿ ನೊಂದ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹಿಸಲಾಗುವುದು ಎಂದು ತಿಳಿಸಿದರು.