ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ
ಬೆಂಗಳೂರು:ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ(111) ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು.
ಸರ್ಕಾರದ ಪರಿಸರ ರಾಯಭಾರಿಯಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.