ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್: ಬಿ.ಕೆ.ಹರಿಪ್ರಸಾದ ವಾಗ್ದಾಳಿ
ಬೆಂಗಳೂರು:ಬಿಜೆಪಿಯದ್ದು  40% ಕಮಿಷನ್ ಸರ್ಕಾರವಾಗಿದೆ. ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಸಚಿವಅಶ್ವತ್ಥನಾರಾಯಣ್ ಮೇಲೆ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ ವಾಗ್ದಾಳಿ ನಡೆಸಿದರು.
ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅಶ್ವತ್ಥ ನಾರಾಯಣನಿಗೆ ಕಮಿಷನ್ ಹೋಗುತ್ತಿದೆ. ಮಲ್ಲೇಶ್ವರಂನ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಇದ್ದಾರೆ. ಈಗ ಪಿಎಸೈ ನೇಮಕಾತಿಯಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಗಂಭೀರ ಆರೋಪ‌ ಕೇಳಿ ಬಂದಿದೆ.
ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ. ಭ್ರಷ್ಟಾಚಾರಕ್ಕೆ ಆರ್ ಎಸ್ ಎಸ್ ಕುಮ್ಮಕ್ಕು ಇದೆ. ಅದರ ಹಣದಿಂದಲೇ ಶ್ರೀಮಂತ ಎನ್ ಜಿಓ ಆಗಿ ಆರ್ ಎಸ್ ಎಸ್ ಇದೆ. ಪ್ರತಿಯೊಬ್ಬ ಸಚಿವರ ಬಳಿ ಆರ್ ಎಸ್ ಎಸ್ ಒಎಸ್ ಡಿ ಇದ್ದಾರೆ. ಹಣ ಕಲೆಕ್ಷನ್ ಮಾಡು ವುದೇ ಒಎಸ್ಡಿಗಳ ಫುಲ್ ಟೈಂ ಡ್ಯುಟಿ. ಹಾವಿನಪುರದಲ್ಲಿ ಕುಳಿತು ಹಣ ಕಲೆಕ್ಷನ್ ಮಾಡುತ್ತಾರೆ.
ಮಂಗಳವಾರ ಅಮಿತ್ ಶಾ ಬಂದಿದ್ರು, ಯಾವುದೇ ಕ್ರಮ ಕೈಗೊಂಡಿಲ್ಲ. ಶೇ.40 ಕಮಿಷನ್ ಹಾಗೂ ಅಕ್ರಮ ಪಿಎಸೈ ನೇಮಕಾತಿಯಲ್ಲಿ ಅಮಿತ್ ಶಾ ಪಾಲು ತೆಗೆದುಕೊಳ್ಳಲು ಬಂದಿದ್ದಾರೆ. ಅಮಿತ್ ಶಾ ಆಗಮನದಿಂದ ರಾಜ್ಯದ ಜನರಿಗೆ ನಯಾಪೈಸೆ ಪ್ರಯೋಜನವಾಗಿಲ್ಲ. ಈ ಕೂಡಲೇ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು.
ಸ್ವ ಇಲಾಖೆಯಲ್ಲಿ ಗಂಭೀರವಾದ ಆರೋಪ‌ ಎದುರಿಸುತ್ತಿರುವ ಗೃಹ ಸಚಿವ ಆರಗ ಜ್ಞಾನೆಂದ್ರ ರಾಜೀನಾಮೆ ನೀಡಬೇಕು. ಸಂಪೂರ್ಣವಾಗಿ ತನಿಖೆ ಯಾಗಬೇಕು, ಗೃಹ ಸಚಿವರ ಮೇಲೆ ತನಿಖೆ ನಡೆಯಬೇಕು. ಮಲ್ಲೇಶ್ವರಂನ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ ಒತ್ತಾಯ ಮಾಡಿದರು.