 : ಬೆಂಗಳೂರಿಗೆ ಗನ್ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್
ನಿಂಬರ್ಗಾ ಇಂದುಮತಿ ಪಿಎಸ್‌ಐ ಗಾಯ
ಆಳಂದ:ಕಳೆದ ಸೆ.13ರಂದು ಪಡಸಾವಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರೆಸಿ ಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯ ವಿವಿಧಡೆ ಬಂದೂಕು ಸರಬರಾಜು ಮಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್‌ಗಳಿವೆ. ವಿಶ್ವನಾಥ್ ಜಮಾದಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾ.ಪಂ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆಪಡಸಾವಳಿಯ ವಿಶ್ವನಾಥ್ ಜಮಾದಾರ್ ಅವರನ್ನು ಖಾನಾಪೂರ- ಜಮಗಾ ಕ್ರಾಸ ಬಳಿ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದರು. ವಿಶ್ವನಾಥ್ ಅವರ ತೆಲೆಗೆ ಮೂರು ಗುಂಡು ಹೊಡೆದಿದ್ದರು. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟಿದ್ದರು. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.
ವಿಶ್ವಾನಥ್ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದರು. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದು, ಮಾಹಿತಿ ಕಲೆ ಹಾಕಿದರು. ಆಳಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: : ನಾಲ್ಕನೇ ಬಾರಿಯೂ ಹೆಣ್ಣು ಮಗುವೆಂದು ನೆಲಕ್ಕೆ ಬಡಿದು ಕೊಂದ ಪಾಪಿ ತಂದೆ