ಇಂದು ಬೆಂಗಳೂರಿಗೆ ’ಚಾಣಕ್ಯ’ ಆಗಮನ
ಬೆಂಗಳೂರು:ಕೇಂದ್ರ ಸಚಿವ ಅಮಿತ್ ಶಾ ಸೋಮವಾರ ಬೆಂಗಳೂರಿಗೆ ಆಗಮಿಸ ಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲಿನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಖಾಸಗಿ ಹೋಟೆಲಿನಲ್ಲೇ ಸಭೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಿಂದ ಹೋಟೆಲಿಗೆ ಸಭೆ ಶಿಫ್ಟ್ ಆಗಿದೆ. ಮಂಗಳವಾರ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ.
ಇನ್ನು ದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಆಗಮಿಸ ಲಿದ್ದಾರೆ.
ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅಮಿತ್ ಶಾರನ್ನ ಇಂದು ಸಂಜೆ ಭೇಟಿಯಾಗುವೆ. ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಶಾ ಬರುತ್ತಿದ್ದಾರೆ.
ಚುನಾವಣಾ ವರ್ಷ ಹಿನ್ನೆಲೆಯಲ್ಲಿ ರಾಜ್ಯದ ಬಗ್ಗೆ ನರೇಂದ್ರ ಮೋದಿ, ಅಮಿತ್ ಶಾ ಹೆಚ್ಚು ಗಮನ ನೀಡಲಿದ್ದಾರೆ. ಮುಂದಿನ ಎಲೆಕ್ಷನ್ನಲ್ಲಿ 150 ಸ್ಥಾನ ಗೆಲ್ಲಲು ಗುರಿ ಇಟ್ಟಿದ್ದೇವೆ. ರಾಜ್ಯ ನಾಯಕರ ಜೊತೆ ಶಾ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದರು.