ಬಸವ ಜಯಂತಿಗೆ ವಿದ್ಯುಕ್ತ ಚಾಲನೆ
ಕಲಬುರಗಿ:ಜಿಲ್ಲಾಡಳಿತ ಹಾಗೂ ಜಿಲ್ಲಾ ಬಸವ ಜಯಂತಿ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ 889ನೇ ಜಯಂತೋತ್ಸವ  ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜ್ಯೋತಿ ಬೆಳಗಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಪಟ್ಟದೇವರು ಶ್ರೀಗಳು ಹಾಗೂ ಚವದಾಪೂರಿ ಹಿರೇಮಠದ ಶ್ರೀ ಡಾ. ರಾಜಶೇಖರ ಶಿವಾಚಾರ್ಯರು ವಹಿಸಿದರು.
ಈ ಸಂದರ್ಭದಲ್ಲಿ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಶಾಸಕರುಗಳಾದ ಬಸವರಾಜ ಮತ್ತಿ ಮೂಡ, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೊಳ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಶರಣ ಕುಮಾರ್ ಮೋದಿ, ಸಿದ್ದಾಜಿ ಪಾಟೀಲ್ ಹಾಗೂ ಜಿಲ್ಲಾ ಬಸವ ಜಯಂತೋತ್ಸವ ಸಮಿತಿ ಅಧ್ಯಕ್ಷ ರವಿ ಬಿರಾದಾರ್ ಸೇರಿದಂತೆ ಮತ್ತಿತರು ಇದ್ದರು.