 : ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ; ಖುದ್ದು ಪರಿಶೀಲಿಸಲು ರಾಯಚೂರು ಎಸ್‌ಪಿಗೆ ಸಿಎಂ ಸೂಚನೆ
ಕಲಬುರಗಿ:ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಆಗಸ್ಟ್ 22 ರಂದು ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ( ) ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಎಸ್‌ಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( ) ಸೂಚನೆ ನೀಡಿದ್ದಾರೆ. ಕಲಬುರಗಿಯಲ್ಲಿ () ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್‌ನಲ್ಲಿ ತೆರಳುವ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು ಎಸ್‌ಪಿ ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.
ಈ ಸುದ್ದಿಯನ್ನೂ ಓದಿ | : ಆರೋಪ ಮಾಡುವುದೇ ಬಿಜೆಪಿ ಕೆಲಸ; ಡಿ.ಕೆ. ಶಿವಕುಮಾರ್
ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ತ  ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆಯನ್ನು ನೀಡಿದರು.