  : ಮೋದಿ ಜನ್ಮದಿನ; ಬಿಜೆಪಿಯಿಂದ ಚಿತ್ರಕಲಾ, ರಂಗೋಲಿ ಶಿಬಿರ
ಬೆಂಗಳೂರು:ಭಾರತೀಯ ಜನತಾ ಪಕ್ಷದ () ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ (  ) ಪ್ರಯುಕ್ತ ಇಂದು ಚಿತ್ರಕಲಾ ಮತ್ತು ರಂಗೋಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಮತ್ತು ರಂಗೋಲಿ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಈ ಸುದ್ದಿಯನ್ನೂ ಓದಿ | : ದ್ರಾವಿಡ್‌ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್‌ ಕೊಹ್ಲಿ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ರಾಜ್ಯ ಸಂಚಾಲಕಿ ರೂಪ ಅಯ್ಯರ್, ಸಹ-ಸಂಚಾಲಕ ಎಚ್.ಎ. ಆತ್ಮಾನಂದ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಸಹ-ಕಾರ್ಯಾಲಯ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಪ್ರಮುಖರು ಮತ್ತು ಕಲಾವಿದರು ಉಪಸ್ಥಿತರಿದ್ದರು.