 : ಇಂದು ಹಾಸನ, ಕೊಡಗು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ
ಬೆಂಗಳೂರು:ಸೆ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ( ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸೆ. 14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ( ), ದಕ್ಷಿಣ ಒಳನಾಡು ಹಾಗಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅದೇ ರೀತಿ ಸೆ.15ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಇದೇ ರೀತಿಯ ಹವಾಮಾನ ಸೆ.18ವರೆಗೆ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಒಣ ಹವಾಮಾನ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 °  ಮತ್ತು 20 °  ಆಗಿರಬಹುದು.